Jeremiah 26:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’ ಮೀಕ 3:12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
Kannada BSI Bible 2016
ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ
Kannada Bible (KNCL) BSI 2016
“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’