Jeremiah 26:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
Kannada BSI Bible 2016
ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು; ಒಂದು ಮಾತನ್ನೂ ಬಿಡಬೇಡ.
Kannada Bible (KNCL) BSI 2016
“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.