Jeremiah 26:23 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಙೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಘಡವರ ಸ್ಮಶಾನದಲ್ಲಿ ಎಸೆಯಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
Kannada Bible (KNCL) BSI 2016
ಅವರು ಊರೀಯನನ್ನು ಈಜಿಪ್ಟಿನಿಂದ ಎಳೆದು ಅರಸ ಯೆಹೋಯಾಕೀಮನ ಬಳಿಗೆ ತಂದರು. ಅರಸ ಅವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಜನಸಾಮಾನ್ಯರ ಸಮಾಧಿಗಳ ನಡುವೆ ಹೂಣಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.