Jeremiah 26:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
Kannada BSI Bible 2016
ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -
Kannada Bible (KNCL) BSI 2016
ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,