Jeremiah 26:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಜನರಿಗೆ ತಿಳಿಸಙೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
Kannada BSI Bible 2016
ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು ನಿನಗೆ ಮರಣವೇ ಆಗಬೇಕು;
Kannada Bible (KNCL) BSI 2016
ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.