Jeremiah 26:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಘಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಘಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಘಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನ್ನು ಮುತ್ತಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
Kannada BSI Bible 2016
ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ - ಈ ಆಲಯವು ಶಿಲೋವಿನ ಗತಿಗೆ ಬರುವದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವದು ಎಂದು ಏಕೆ ನುಡಿದೆ ಅಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
Kannada Bible (KNCL) BSI 2016
“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.