Jeremiah 27:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರು ನಿಮಗೆ ಹೇಳುವುದು ಸುಳ್ಳುಗಳೇ. ಅವರು ನಿಮ್ಮನ್ನು ನಿಮ್ಮ ದೇಶದಿಂದ ಘಹುದೂರ ತೆಗೆದುಕೊಂಡು ಹೋಗುವರು. ನಾನು ನಿಮ್ಮನ್ನು ನಿಮ್ಮ ದೇಶದಿಂದ ಘಲವಂತವಾಗಿ ಹೊರಗಟ್ಟುವೆನು. ನೀವು ಅನ್ಯ ದೇಶದಲ್ಲಿ ಸಾಯುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.
Kannada BSI Bible 2016
ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.
Kannada Bible (KNCL) BSI 2016
ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು; ನೀವು ದೇಶಭ್ರಷ್ಟರಾಗಿ ನಾಶವಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.