Jeremiah 27:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬಂದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.”‘ ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”
Kannada BSI Bible 2016
ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವದೋ ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಗೆಯ್ದು ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.
Kannada Bible (KNCL) BSI 2016
ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೆ ನೆಲೆಗೊಳಿಸುವೆನು; ಅವರು ಅಲ್ಲೆ ಉತ್ತು, ಬಿತ್ತು ವಾಸಮಾಡುವರು. ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ”