Jeremiah 27:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನ್ನು ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನ್ನ ಹೆಗಲನ್ನು ಬಾಬಿಲೋನಿನ ರಾಜನ ನೊಗಕ್ಕೆ ಕೊಡಬೇಕು; ಅವನ ಆಜ್ಞಾಪಾಲನೆ ಮಾಡಬೇಕು. ಬಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಬಂದುಕುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
Kannada BSI Bible 2016
ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು - ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
Kannada Bible (KNCL) BSI 2016
ಜುದೇಯದ ಅರಸನಾದ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.