Jeremiah 27:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನ್ನ ಜನರು ವೈರಿಗಳ ಖಡ್ಗದಿಂದಲೂ ಹಸಿವೆಯಿಂದಲೂ ಭಯಂಕರವಾದ ವ್ಯಾಊಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.
Kannada BSI Bible 2016
ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೂ ನಿನ್ನ ಜನರೂ ಖಡ್ಗ ಕ್ಷಾಮವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವದೆಂದು ಯೆಹೋವನು ನುಡಿದಿದ್ದಾನಷ್ಟೆ.
Kannada Bible (KNCL) BSI 2016
ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯಬೇಕಾಗುವುದೆಂದು ಯೆಹೋವ ದೇವರೇ ನುಡಿದಿದ್ದಾರೆ. ಅಂಥ ಗತಿ ನಿಮಗೂ, ನಿಮ್ಮ ಪ್ರಜೆಗೂ ಏಕೆ ಬರಬೇಕು?