Jeremiah 27:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ”‘ ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”
Kannada BSI Bible 2016
ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ; ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.
Kannada Bible (KNCL) BSI 2016
ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”