Jeremiah 27:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.
Kannada BSI Bible 2016
ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ಯಾಜಕರಿಗೂ ಈ ಸಕಲ ಜನರಿಗೂ ಹೀಗೆ ನುಡಿದೆನು - ಯೆಹೋವನು ಇಂತೆನ್ನುತ್ತಾನೆ - ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು ಎಂಬದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.
Kannada Bible (KNCL) BSI 2016
ಬಳಿಕ ನಾನು ಯಾಜಕರಿಗೂ ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಸರ್ವೇಶ್ವರನ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ನಾನು ಯಾಜಕರಿಗೂ, ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಯೆಹೋವ ದೇವರ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು,’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.