Jeremiah 27:21 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನ ಆಲಯದಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆಯೂ ರಾಜನ ಅರಮನೆಯಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ಉಳಿದಿರುವ ವಸ್ತುಗಳ ಬಗ್ಗೆಯೂ ಹೀಗೆನ್ನುತ್ತಾನೆ: “ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ -
Kannada Bible (KNCL) BSI 2016
ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”