Jeremiah 27:22 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ‘ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.”‘ ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’”
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಬಾಬೆಲಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.
Kannada Bible (KNCL) BSI 2016
“ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವ ತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”