Jeremiah 27:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸಂದೇಶವನ್ನು ತಮ್ಮ ಒಡೆಯರಿಗೆ ತಿಳಿಸಙೇಕೆಂದು ಆ ರಾಯಭಾರಿಗಳಿಗೆ ಹೇಳು. ಅವರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’
Kannada BSI Bible 2016
ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ರಾಯಭಾರಿಗಳಿಗೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು -
Kannada Bible (KNCL) BSI 2016
ಅವರು ತಮ್ಮ ತಮ್ಮ ರಾಜರುಗಳಿಗೆ ಅದನ್ನು ತಿಳಿಸುವಂತೆ ಆಜ್ಞಾಪಿಸು. ಆ ಸಮಾಚಾರವೇನೆಂದರೆ - ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತುಗಳಿವು; ನಿಮ್ಮ ರಾಜರುಗಳು ಅರಿಯಬೇಕಾದ ವಿಷಯವಿದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು: