Jeremiah 27:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಘಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಘಂದವರಿಗೆ ಕೊಡಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
Kannada BSI Bible 2016
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ;
Kannada Bible (KNCL) BSI 2016
ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.