Jeremiah 27:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
Kannada BSI Bible 2016
ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್‌: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೆ ಕೊಡಬಲ್ಲೆನು; ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
Kannada Bible (KNCL) BSI 2016
ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.