Jeremiah 27:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಊಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಘಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಘೂಕದೆಐಚ್ಚರನನ್ನು ಉಪಯೋಗಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.
Kannada BSI Bible 2016
ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಜನಾಂಗ, ಯಾವ ರಾಜ್ಯ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೋ ಆ ಜನಾಂಗವನ್ನು ನಾನು ಖಡ್ಗ ಕ್ಷಾಮವ್ಯಾಧಿಗಳಿಂದ ದಂಡಿಸುತ್ತಾ ಬಂದು ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು. ಇದು ಯೆಹೋವನ ನುಡಿ.
Kannada Bible (KNCL) BSI 2016
“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.