Jeremiah 27:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಾಂತ್ರಗಳನ್ನು ಘಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆವೆಂಘ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ, “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.
Kannada BSI Bible 2016
ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು;
Kannada Bible (KNCL) BSI 2016
“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.