Jeremiah 28:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದಲ್ಲಿ ಚಿದ್ಕೀಯನ ಆಳಿಬಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಘ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಙ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,
Kannada BSI Bible 2016
ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ವರುಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರುಷದ ಐದನೆಯ ತಿಂಗಳಲ್ಲಿ ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು -
Kannada Bible (KNCL) BSI 2016
ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ,