Jeremiah 28:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.”‘ ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.
Kannada BSI Bible 2016
ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದುಹಾಕುವೆನು ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟು ಹೋದನು.
Kannada Bible (KNCL) BSI 2016
ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’ ” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು.