Jeremiah 28:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ, ನಾನು ಕಬ್ಬಿಣದ ನೊಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಘೂಕದೆಐಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಊಕಾರವನ್ನು ದಯಪಾಲಿಸುವೆನು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.
Kannada BSI Bible 2016
ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾವು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಸೇವಿಸೇ ಸೇವಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ ಎಂದು ಹೇಳು.
Kannada Bible (KNCL) BSI 2016
ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”