Jeremiah 28:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.
Kannada BSI Bible 2016
ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನ್ನನ್ನು ಭೂವಿುಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರುಷ ಸಾಯುವಿ ಎಂದು ಹೇಳಿದನು.
Kannada Bible (KNCL) BSI 2016
ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು.