Jeremiah 28:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾವು ನೆಮ್ಮದಿಯಿಂದ ಇರುವೆವು ಎಂದು ಪ್ರವಾದಿಸುವ ಪ್ರವಾದಿಯು ನಿಜವಾಗಿಯೂ ಯೆಹೋವನಿಂದ ಕಳುಹಿಸಲ್ಪಟ್ಟಿರುವನೇ ಎಂಬುದನ್ನು ನಾವು ಪರೀಕ್ಷಿಸಬೇಕು. ಆ ಪ್ರವಾದಿಯ ಸಂದೇಶವು ಸತ್ಯವಾಗಿ ಪರಿಣಮಿಸಿದರೆ ಅವನು ನಿಜವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವನೆಂದು ಜನರು ತಿಳಿದುಕೊಳ್ಳಘಹುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.
Kannada BSI Bible 2016
ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು ಎಂದು ಹೇಳಿದನು.
Kannada Bible (KNCL) BSI 2016
ಹಿತಸಮಾಚಾರವನ್ನು ಸಾರುವ ಪ್ರವಾದಿಯೇ ಸರ್ವೇಶ್ವರನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೆ ತಿಳಿಯತಕ್ಕದ್ದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.