Jeremiah 29:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಘಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
Kannada BSI Bible 2016
ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ರಾಜ್ಯವು ಎಪ್ಪತ್ತು ವರುಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
Kannada Bible (KNCL) BSI 2016
“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.