Jeremiah 29:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
Kannada BSI Bible 2016
ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
Kannada Bible (KNCL) BSI 2016
ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.