Jeremiah 29:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,
Kannada BSI Bible 2016
ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ -
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ, ದಾವೀದನ ಸಿಂಹಾಸನವನ್ನು ಅಲಂಕರಿಸಿದ್ದ ಅರಸನ ವಿಷಯವಾಗಿ ಹಾಗೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸೋದರರೂ ಈ ನಗರದ ನಿವಾಸಿಗಳೂ ಆದವರ ವಿಷಯವಾಗಿ ಹೇಳಿರುವುದನ್ನು ಕೇಳಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ, ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ