Jeremiah 29:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಊಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಙೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.
Kannada Bible (KNCL) BSI 2016
ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.