Jeremiah 29:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”
Kannada BSI Bible 2016
ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸಿ ಹೇಳಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು. ಇದು ಯೆಹೋವನ ನುಡಿ.
Kannada Bible (KNCL) BSI 2016
ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದೆಹೋದರು. ನನ್ನ ದಾಸರಾದ ಪ್ರವಾದಿಗಳನ್ನು ಪದೇಪದೇ ಅವರ ಬಳಿಗೆ ಕಳಿಸಿದರೂ ಕೇಳಲೊಲ್ಲದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.