Jeremiah 29:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೊಲಾಯನ ಮಗನಾದ ಅಹಾಘ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿದ ಘಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸುವೆನು. ನೆಘೂಕದೆಐಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.
Kannada BSI Bible 2016
ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ - ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು;
Kannada Bible (KNCL) BSI 2016
“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು.