Jeremiah 29:25 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಯೆರೂಸಲೇವಿುನಲ್ಲಿರುವ ಎಲ್ಲಾ ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನ ಮೇಲೆ ಕಳುಹಿಸಿದ ಕಾಗದದಲ್ಲಿ -
Kannada Bible (KNCL) BSI 2016
“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ - ‘ನೀನು ಜೆರುಸಲೇಮಿನಲ್ಲಿರುವ ಜನರೆಲ್ಲರಿಗೂ ಯಾಜಕನಾದ ಮಾಸೇಯನ ಮಗ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನಲ್ಲೆ ಪತ್ರ ಬರೆದು ಕಳಿಸಿರುವೆ. ಚೆಫನ್ಯನಿಗೆ ನೀನು ಹೀಗೆಂದು ಬರೆದಿರುವೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ, ಮಾಸೇಯನ ಮಗ ಯಾಜಕನಾದ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದೆಯಲ್ಲಾ?