Jeremiah 29:28 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: “ಬಾಬಿಲೋನಿನಲ್ಲಿರುವ ನೀವು ಅಲ್ಲಿ ಘಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಘಳಸಿರಿ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು - ಪರದೇಶ ವಾಸವು ನಿಮಗೆ ದೀರ್ಘವಾಗುವದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬದಾಗಿ ಬರೆದ ಕಾರಣ [ನಾನು ನಿನ್ನನ್ನು ದಂಡಿಸುವದು ಖಂಡಿತ].
Kannada Bible (KNCL) BSI 2016
ಅವನು ಬಾಬಿಲೋನಿನಲ್ಲಿರುವ ನಮಗೆ ಪತ್ರ ಕಳಿಸಿ, ‘ಪರದೇಶವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ತಿಳಿಸಿದ್ದಾನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಅವನು ಸೆರೆಯು ಬಹಳ ದೀರ್ಘವಾಗುವುದು, ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ; ಎಂದು ನಮಗೆ ಬಾಬಿಲೋನಿಗೆ ಹೇಳಿ ಕಳುಹಿಸಿದ್ದಾನೆ.’ ”