Jeremiah 29:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಘೂಕದೆಐಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.
Kannada BSI Bible 2016
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬೆಲಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ, ಇವರ ಕೈಯಲ್ಲಿ ಯೆರೂಸಲೇವಿುನಿಂದ ಬರೆದು ರವಾನಿಸಿದ ಕಾಗದದ ಮಾತೇನಂದರೆ -
Kannada Bible (KNCL) BSI 2016
ಅದನ್ನು ಶಾಫಾನನ ಮಗ ಎಲ್ಲಾಸ, ಹಿಲ್ಕೀಯನ ಮಗ ಗೆಮರ್ಯ ಇವರ ಕೈಯಲ್ಲಿ ಕಳಿಸಿದನು. ಇವರು ಜುದೇಯದ ಅರಸ ಚಿದ್ಕೀಯನಿಂದ ಬಾಬಿಲೋನಿಗೆ ಅದರ ಅರಸ ನೆಬೂಕದ್ನೆಚ್ಚರನ ಬಳಿಗೆ ಕಳಿಸಲಾಗಿದ್ದ ರಾಯಭಾರಿಗಳು. ಆ ಪತ್ರದ ಮಾತುಗಳು ಇವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರೀಯನ ಕೈಯಿಂದಲೂ ಕಳುಹಿಸಿದ ಪತ್ರ: