Jeremiah 29:32 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಘವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.”‘ ಇದು ಯೆಹೋವನ ನುಡಿ. ‘“ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.
Kannada Bible (KNCL) BSI 2016
ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”