Jeremiah 29:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
Kannada BSI Bible 2016
ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
Kannada Bible (KNCL) BSI 2016
ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”