Jeremiah 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?
Kannada BSI Bible 2016
ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ.