Jeremiah 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರೆಮೀಯನೇ, ಹೋಗು. ಈ ಸಂದೇಶವನ್ನು ಉತ್ತರದಿಕ್ಕಿನಲ್ಲಿ ಸಾರು. ಯೆಹೋವನು ಹೀಗೆ ಹೇಳುತ್ತಾನೆ: “‘ವಿಶ್ವಾಸದ್ರೋಹಿಗಳಾದ ಇಸ್ರೇಲಿನ ಜನರೇ, ಹಿಂತಿರುಗಿ ಬನ್ನಿ. ನಾನು ಕೋಪಮುಖದಿಂದ ನಿಮ್ಮನ್ನು ನೋಡುವುದನ್ನು ನಿಲ್ಲಿಸುವೆನು. ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.’ ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
Kannada BSI Bible 2016
ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
Kannada Bible (KNCL) BSI 2016
ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.