Jeremiah 3:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಘಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.
Kannada BSI Bible 2016
ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ದೇಶದಲ್ಲಿ ಹೆಚ್ಚಿನ ವೃದ್ಧಿಗೆ ಬಂದಿರುವಾಗ ಇನ್ನು ಯೆಹೋವನ ನಿಬಂಧನಮಂಜೂಷದ ಪ್ರಸ್ತಾಪವಿರದು, ಅದು ಜ್ಞಾಪಕಕ್ಕೆಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು, ಇದು ಯೆಹೋವನ ನುಡಿ.
Kannada Bible (KNCL) BSI 2016
ನೀವು ನಾಡಿನಲ್ಲಿ ಹೆಚ್ಚಿ ಅಭಿವೃದ್ಧಿಯಾದಾಗ, ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವೆಲ್ಲಿ?’ ಎಂದು ಪ್ರಸ್ತಾಪಿಸುವಂತಿಲ್ಲ. ಅದು ಜ್ಞಾಪಕಕ್ಕೆ ಬರುವುದಿಲ್ಲ, ಯಾರೂ ಅದನ್ನು ಸ್ಮರಿಸುವುದಿಲ್ಲ. ಅದು ಇಲ್ಲವಲ್ಲಾ ಎಂದು ದುಃಖಿಸುವುದಿಲ್ಲ. ಹೊಸದೊಂದನ್ನು ಕಲ್ಪಿಸಿಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ.