Jeremiah 3:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬೋಳುಪರ್ವತದ ಮೇಲೆ ಅಳುವ ಧ್ವನಿಯನ್ನು ನೀವು ಕೇಳಘಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟುಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.
Kannada BSI Bible 2016
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕುದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತು ಬಿಟ್ಟಿದ್ದೇವೆಂದು ಇಸ್ರಾಯೇಲ್ಯರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.
Kannada Bible (KNCL) BSI 2016
ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ: ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.