Jeremiah 3:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. ಅದಕ್ಕೆ ಜನರು “ಆಗಲಿ, ನಾವು ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
Kannada BSI Bible 2016
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.
Kannada Bible (KNCL) BSI 2016
ಸರ್ವೇಶ್ವರ: “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.