Jeremiah 3:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಕೇವಲ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
Kannada BSI Bible 2016
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
Kannada Bible (KNCL) BSI 2016
ಜನರು: “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.