Jeremiah 3:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪೂರ್ವಿಕರು ಸಂಪಾದಿಸಿದ್ದೆಲ್ಲವನ್ನು ನೈವೇದ್ಯದಲ್ಲಿ ಸುಳ್ಳುದೇವರಾದ ಬಾಳನು ತಿಂದುಬಿಟ್ಟನು. ನಮ್ಮ ಬಾಲ್ಯದಿಂದಲೂ ಹೀಗಾಗುತಾ ಬಂದಿದೆ. ಭಯಂಕರವಾದ ಆ ಸುಳ್ಳು ದೇವರು ನಮ್ಮ ಪೂರ್ವಿಕರ ದನಕುರಿಗಳನ್ನೂ ಅವರ ಗಂಡುಹೆಣ್ಣುಮಕ್ಕಳನ್ನೂ ಬಲಿ ತೆಗೆದುಕೊಳ್ಳುತ್ತಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.
Kannada BSI Bible 2016
ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡು ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.
Kannada Bible (KNCL) BSI 2016
ನಾವು ಚಿಕ್ಕಂದಿನಿಂದ ನೋಡಿರುವಂತೆ ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಬಾಳ್ ದೇವತೆ ಕಬಳಿಸುತ್ತಾ ಬಂದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ ನಮ್ಮ ತಂದೆಗಳ ಕಷ್ಟವನ್ನೂ, ಅವರ ಕುರಿಗಳನ್ನೂ, ಅವರ ದನಗಳನ್ನೂ, ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ.