Jeremiah 3:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ” ಎಂದು ಮೊರೆಯಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.
Kannada BSI Bible 2016
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ; ನಮ್ಮ ದೇವರಾದ ಯೆಹೋವನಿಗೆ ನಾವೂ ನಮ್ಮ ಪಿತೃಗಳೂ ನಮ್ಮ ಚಿಕ್ಕತನದಿಂದ ಈಗಿನವರೆಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ ಎಂದು ಮೊರೆಯಿಡುತ್ತಾರೆ.
Kannada Bible (KNCL) BSI 2016
ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”