Jeremiah 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ, ಯೆಹೂದವೇ, ‘ದೇವರು ಯಾವಾಗಲೂ ನನ್ನ ಮೇಲೆ ಕೋಪಿಷ್ಟನಾಗಿರುವುದಿಲ್ಲ. ದೇವರ ಕೋಪವು ಶಾಶ್ವತವಾಗಿರುವುದಿಲ್ಲ’ ಎಂದು ನೀನು ಹೇಳಿದೆಯಲ್ಲಾ. “ಆದರೆ ನಿನ್ನಿದ ಸಾಧ್ಯವಾದಷ್ಟು ಕೆಡುಕನ್ನು ಮಾಡುವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ.
Kannada BSI Bible 2016
ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಿತ್ಯವಾಗಿ ಕೋಪಮಾಡುವನೋ? ಕೊನೆಯ ತನಕ ಇಟ್ಟುಕೊಳ್ಳುವನೋ? ಅಂದುಕೊಳ್ಳುತ್ತಿದ್ದೀ. ಇಗೋ, ನೀನು ಹೀಗೆ ಮಾತಾಡಿದರೇನು? ದುಷ್ಕೃತ್ಯಗಳನ್ನು ನಡಿಸಿ ಕೃತಾರ್ಥಳಾಗಿದ್ದೀ.
Kannada Bible (KNCL) BSI 2016
ನಿತ್ಯಕ್ಕೂ ಕೋಪ ಮಾಡಬೇಡಿ; ಕೊನೆಯತನಕ ಸಿಟ್ಟುಗೊಳ್ಳಬೇಡಿ’ ಎಂದು ಕೋರುತ್ತಿರುವೆ. ಹೀಗಲ್ಲ ನೀನು ಹೇಳುತ್ತಿರುವೆಯಾದರೂ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿ ಕೃತಾರ್ಥಳಾಗಿರುವೆ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ? ಇಗೋ, ನೀನು ಹೀಗೆ ಮಾತನಾಡಿದರೇನು? ಆದರೆ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿದ್ದಿ.”