Jeremiah 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.
Kannada BSI Bible 2016
ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.
Kannada Bible (KNCL) BSI 2016
ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.