Jeremiah 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಈ ದುಷ್ಕೃತ್ಯಗಳನೆಐಲ್ಲಾ ಮಾಡಿ ಮುಗಿಸಿದ ಮೇಲೆಯೂ ಇಸ್ರೇಲ್ ನನ್ನಲ್ಲಿಗೆ ಬರಘಹುದು’ ಎಂದು ನಾನು ಭಾವಿಸಿದ್ದೆ. ಆದರೆ ಅವಳು ನನ್ನಲ್ಲಿಗೆ ಬರಲಿಲ್ಲ. ಇಸ್ರೇಲಿನ ವಂಚಕಿ ಸಹೋದರಿಯಾದ ಯೆಹೂದ ಎಂಬಾಕೆಯು ಮಾಡಿದ್ದನ್ನು ನೋಡಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.
Kannada BSI Bible 2016
ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ಇವುಗಳನ್ನೆಲ್ಲಾ ನಡಿಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.
Kannada Bible (KNCL) BSI 2016
ಅವಳು ಇಂಥವುಗಳನ್ನೆಲ್ಲ ಮಾಡಿದ ಮೇಲೆ ನನ್ನ ಬಳಿಗೆ ಮರಳಿ ಬಂದೇ ಬರುವಳು ಎಂದುಕೊಂಡಿದ್ದೆ. ಆದರೆ ಬರಲಿಲ್ಲ. ಆಗ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ಇದನ್ನು ನೋಡಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.