Jeremiah 30:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಘನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಘನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”
Kannada BSI Bible 2016
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;
Kannada Bible (KNCL) BSI 2016
“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.