Jeremiah 30:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
Kannada BSI Bible 2016
ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನಿನ್ನ ಗಾಯವು ಗುಣಹೊಂದದು, ನಿನ್ನ ಬಾಸುಂಡೆಯು ಘೋರವಾಗಿದೆ.
Kannada Bible (KNCL) BSI 2016
ಹೌದು, ಸರ್ವೇಶ್ವರ ಹೀಗೆನ್ನುತ್ತಾರೆ: “ನಿನ್ನ ಗಾಯಗಳು ಗುಣಹೊಂದವು ನಿನ್ನ ಹುಣ್ಣನ್ನು ವಾಸಿಮಾಡಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಿನ್ನ ಗಾಯವು ಗುಣವಾಗದಂಥಾದ್ದು. ನಿನ್ನ ಬಾಸುಂಡೆಯು ಅಘೋರವಾದದ್ದು.