Jeremiah 30:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಅನೇಕ ಜನಾಂಗಗಳೊಡನೆ ಸೆಐಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ “ಸ್ನೇಹಿತರು” ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಘಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
Kannada BSI Bible 2016
ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ವಿುಂಡರಾರೂ ನಿನ್ನನ್ನು ಹುಡುಕುವದಿಲ್ಲ, ಮರೆತುಬಿಟ್ಟರು; ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
Kannada Bible (KNCL) BSI 2016
ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;