Jeremiah 30:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”
Kannada BSI Bible 2016
ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳೆಲ್ಲಾ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು, ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.
Kannada Bible (KNCL) BSI 2016
ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.